Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:13 - ಕನ್ನಡ ಸತ್ಯವೇದವು J.V. (BSI)

13 ಶವವನ್ನು ಆಚೆ ಹಾಕಿದನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಯೋವಾಬನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕಾಗಿ ಯೋವಾಬನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿಕೊಂಡು ಹೋದ ಮೇಲೆ ಜನರೆಲ್ಲರೂ ಯೋವಾಬನನ್ನು ಹಿಂಬಾಲಿಸಿದರು. ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋಗಲು ಅವರು ಯೋವಾಬನೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಶವವನ್ನು ರಾಜಮಾರ್ಗದಿಂದ ಎಳೆದು ಆಚೆ ಹಾಕಿದ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ, ಬಿಕ್ರಿಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:13
14 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು.


ದಾರಿದೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ; ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!


ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬವನನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.


ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು - ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲಿವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು


ಸತ್ಯವಂತನ ರಾಜಮಾರ್ಗ ಹಾನಿಗೆ ದೂರ; ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.


ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇವಿುಗೆ ಬಂದು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್‍ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.


ಶೀಲೋವಿನಲ್ಲಿ ವರ್ಷ ವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬದು ಅವರಿಗೆ ನೆನಪಿಗೆ ಬಂದಿತು. (ಶೀಲೋ ಎಂಬದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆವಿುಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೆಬೋನದ ದಕ್ಷಿಣಕ್ಕೂ ಇರುತ್ತದೆ.)


ಅದಕ್ಕೆ ಇಸ್ರಾಯೇಲ್ಯರು - ನಾವು ರಾಜಮಾರ್ಗದಲ್ಲಿಯೇ ಹೋಗುವೆವು; ನಾವೂ ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆಕೊಡುವೆವು; ಬೇರೆ ಏನೂ ನಮಗೆ ಬೇಡ; ಕಾಲ್ನಡೆಯಾಗಿ ದಾಟಿ ಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು ಎಂದು ಹೇಳಿದರು.


ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು - ದಾವೀದ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ ಎಂದು ಕೂಗಿದನು.


ಶೆಬನು ಇಸ್ರಾಯೇಲ್‍ಪ್ರಾಂತಗಳಲ್ಲಿ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರಿಯರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು