2 ಸಮುಯೇಲ 20:16 - ಕನ್ನಡ ಸತ್ಯವೇದವು J.V. (BSI)16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಹೆಂಗಸು ಅವರಿಗೆ - ಕೇಳಿರಿ, ದಯವಿಟ್ಟು ಕೇಳಿರಿ; ಯೋವಾಬನು ಮಾತಾಡುವದಕ್ಕೋಸ್ಕರ ನನ್ನ ಬಳಿಗೆ ಬರಬೇಕೆಂದು ಹೇಳಿರಿ ಎಂದು ಕೂಗಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಮಹಿಳೆ ಅವರಿಗೆ, “ಕೇಳಿ, ದಯವಿಟ್ಟು ಕೇಳಿ; ಯೋವಾಬನು ಮಾತಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ,” ಎಂದು ಕೂಗಿದಳು. ಯೋವಾಬನು ಬಂದನು. ಆ ಸ್ತ್ರೀ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ನಗರದ ಬುದ್ಧಿವಂತೆ ಸ್ತ್ರೀಯೊಬ್ಬಳು ಪಟ್ಟಣದೊಳಗಿಂದ ಜೋರಾಗಿ ಕೂಗುತ್ತಾ, “ನನ್ನ ಮಾತನ್ನು ಕೇಳಿ. ಯೋವಾಬನನ್ನು ಇಲ್ಲಿಗೆ ಬರಲು ಹೇಳಿ. ನಾನು ಅವನ ಜೊತೆಯಲ್ಲಿ ಮಾತಾಡಬೇಕಾಗಿದೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ, “ಕೇಳಿರಿ, ಕೇಳಿರಿ. ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸಮೀಪಿಸಲು ಬರಹೇಳಿರಿ,” ಎಂದು ಕೂಗಿ ಬೇಡಿಕೊಂಡಳು. ಅಧ್ಯಾಯವನ್ನು ನೋಡಿ |