19 ನಮ್ಮ ಪಟ್ಟಣವು ಇಸ್ರಾಯೇಲ್ಯರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲ್ಯರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದೀ; ನೀನು ಯೆಹೋವನ ಸ್ವಾಸ್ತ್ಯವನ್ನು ನುಂಗಿಬಿಡುವದೇಕೆ ಅಂದಳು.
19 ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.
19 ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.
19 ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.
19 ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.
ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.
ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು - ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವದನ್ನು ಕೊಟ್ಟರೆ ನೀವು ಯೆಹೋವನ ಸ್ವಾಸ್ತ್ಯವನ್ನು ಆಶೀರ್ವದಿಸುವಿರಿ ಎಂದು ಕೇಳಿದನು.
ಆದದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ - ನೀನು ಈ ರಾತ್ರಿ ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇಳುಕೊಳ್ಳಬೇಡ; ಶೀಘ್ರವಾಗಿ ಹೊಳೆದಾಟಿ ಮುಂದೆ ಹೋಗಿಬಿಡು; ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ ಎಂದು ಹೇಳಿಕಳುಹಿಸಿರಿ ಅಂದನು.
ಈ ಗುಡಾರದಲ್ಲಿರುವವರಾದ ನಾವು ಭಾರ ಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿ ಹೋಗಬೇಕೆಂದು ನಮ್ಮ ಇಷ್ಟವಲ್ಲ; ಮರ್ತ್ಯವಾದದ್ದು ನುಂಗಿಹೋಗಿ ಜೀವವೊಂದೇ ಉಳಿಯುವಂತೆ ಈ ಗುಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಬೇಕೆಂಬದೇ ನಮ್ಮ ಇಷ್ಟ.
ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವದು. ಆ ಮಾತು ಏನಂದರೆ - ಮರಣವು ನುಂಗಿಯೇ ಹೋಯಿತು, ಜಯವಾಯಿತು ಎಂಬದೇ.
ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ಕಿಸಿದು ಛೀಗುಟ್ಟಿ ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ ಇದು, ಬಂದೊದಗಿತು, ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.
ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.
[ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.
ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
ಕರ್ತನೇ, ಯೆಹೋವನೇ, ನೀನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ - ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ ಎಂದು ದೇವರನ್ನು ಪ್ರಾರ್ಥಿಸಿದನು.