2 ಸಮುಯೇಲ 20:21 - ಕನ್ನಡ ಸತ್ಯವೇದವು J.V. (BSI)21 ಸಂಗತಿಯು ಹೀಗಿರುವದಿಲ್ಲ; ಎಫ್ರಾಯೀಮ್ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನೇ ಒಪ್ಪಿಸಿರಿ; ನಾನು ಊರನ್ನು ಬಿಟ್ಟುಹೋಗುತ್ತೇನೆ ಎಂದು ಹೇಳಿದನು. ಅದಕ್ಕೆ ಸ್ತ್ರೀಯು - ನೋಡು, ಈಗಲೇ ಅವನ ತಲೆಯು ಗೋಡೆಯಕಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವದು ಎಂದು ಉತ್ತರಕೊಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಎಫ್ರಾಯೀಮ್ ಬೆಟ್ಟಪ್ರದೇಶದ ಒಬ್ಬ ಮನುಷ್ಯನಿದ್ದಾನೆ ಅವನನ್ನು ಶೆಬ ಎನ್ನುತ್ತಾರೆ. ಅವನು ಬಿಕ್ರೀಯನ ಮಗನು. ಅವನು ರಾಜನಾದ ದಾವೀದನ ವಿರುದ್ಧ ದಂಗೆ ಎದ್ದಿದ್ದಾನೆ. ನೀನು ಅವನನ್ನು ನನ್ನ ಬಳಿಗೆ ತಂದು ಒಪ್ಪಿಸಿದರೆ, ನಾನು ಈ ನಗರವನ್ನು ಬಿಟ್ಟುಹೋಗುತ್ತೇನೆ” ಎಂದು ಉತ್ತರಿಸಿದನು. ಅವಳು ಯೋವಾಬನಿಗೆ, “ಸರಿ, ಅವನ ತಲೆಯನ್ನು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕಾರ್ಯವು ಹಾಗಲ್ಲ. ಏಕೆಂದರೆ ಬಿಕ್ರಿಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯೀಮ್ ಬೆಟ್ಟದವನಾದ ಒಬ್ಬ ಮನುಷ್ಯನು, ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ. ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು,” ಎಂದನು. ಆ ಸ್ತ್ರೀಯು ಯೋವಾಬನಿಗೆ, “ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು,” ಎಂದಳು. ಅಧ್ಯಾಯವನ್ನು ನೋಡಿ |
ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಅಟ್ಟಿ ಅಲ್ಲಿನವರಿಗೆ - ನೀವು ವಿುದ್ಯಾನ್ಯರಿಗೆ ವಿರೋಧವಾಗಿ ಹೊರಟು ಅವರು ಬೇತ್‍ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ದಾಟಿ ಹೋಗದಂತೆ ಅಡ್ಡಗಟ್ಟಿರಿ ಎಂದು ಹೇಳಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಯೊರ್ದನ್‍ಹೊಳೆಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.