2 ಸಮುಯೇಲ 21:16 - ಕನ್ನಡ ಸತ್ಯವೇದವು J.V. (BSI)16 ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವದಕ್ಕಿದ್ದನು. ಅವನ ಬರ್ಜಿಯ ತಾಮ್ರವು ಮುನ್ನೂರು ರೂಪಾಯಿ ತೂಕದ್ದು; ಅವನು ಸೊಂಟಕ್ಕೆ ಹೊಸ [ಕತ್ತಿಯನ್ನು] ಕಟ್ಟಿಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನನ್ನು ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವುದಕ್ಕಿದ್ದನು. ಅವನ ಭರ್ಜಿಯ ತಾಮ್ರ ಮುನ್ನೂರು ಬೆಳ್ಳಿ ನಾಣ್ಯದ ತೂಕದ್ದು; ಅವನು ಸೊಂಟಕ್ಕೆ ಒಂದು ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇಷ್ಬೀಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜಿಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು. ಅಧ್ಯಾಯವನ್ನು ನೋಡಿ |