2 ಸಮುಯೇಲ 21:17 - ಕನ್ನಡ ಸತ್ಯವೇದವು J.V. (BSI)17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ - ಇಸ್ರಾಯೇಲ್ಯರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು ಎಂದು ಖಂಡಿತವಾಗಿ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು. ಅಧ್ಯಾಯವನ್ನು ನೋಡಿ |
ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು.
ಆಗ ಕಾರೇಹನ ಮಗನಾದ ಯೋಹಾನಾನನು ವಿುಚ್ಪದಲ್ಲಿ ಗೆದಲ್ಯನಿಗೆ - ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವದಲ್ಲಾ; ಏಕೆ ಹೀಗಾಗಬೇಕು ಎಂದು ರಹಸ್ಯವಾಗಿ ವಿಜ್ಞಾಪಿಸಲು