Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:3 - ಕನ್ನಡ ಸತ್ಯವೇದವು J.V. (BSI)

3 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು - ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವದನ್ನು ಕೊಟ್ಟರೆ ನೀವು ಯೆಹೋವನ ಸ್ವಾಸ್ತ್ಯವನ್ನು ಆಶೀರ್ವದಿಸುವಿರಿ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:3
9 ತಿಳಿವುಗಳ ಹೋಲಿಕೆ  

ನಮ್ಮ ಪಟ್ಟಣವು ಇಸ್ರಾಯೇಲ್ಯರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲ್ಯರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದೀ; ನೀನು ಯೆಹೋವನ ಸ್ವಾಸ್ತ್ಯವನ್ನು ನುಂಗಿಬಿಡುವದೇಕೆ ಅಂದಳು.


ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.


ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಅವನು ಆ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದಕ್ಕಾಗಿ ಅಂಗೀಕಾರವಾಗುವದು.


ಮರುದಿನದಲ್ಲಿ ಮೋಶೆ ಜನರಿಗೆ - ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು; ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆಯು ನನ್ನ ಮೂಲಕ ದೊರಕೀತು ಎಂದು ಹೇಳಿದನು.


ಬಳಿಕ ಸಮುದ್ರವು ಹೆಚ್ಚೆಚ್ಚಾಗಿ ಅಲ್ಲಕಲ್ಲೋಲವಾದ ಕಾರಣ ಅವರು - ನಮ್ಮ ಮೇಲೆ ಎದ್ದಿರುವ ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ ಎಂದು ಪ್ರಶ್ನೆಮಾಡಲು ಅವನು ಅವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು