Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:6 - ಕನ್ನಡ ಸತ್ಯವೇದವು J.V. (BSI)

6 ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:6
22 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಎಲ್ಲಾ ಜನರಿಗೆ - ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ ಎನ್ನಲು ಜನರೆಲ್ಲರೂ - ಅರಸನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಲು ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.


ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.


ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ಕೊಟ್ಟನು. ಅವನು ನಾಲ್ವತ್ತು ವರುಷ ಆಳಿದನು.


ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.


ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಮಂದಿಯನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.


ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ ಅದಕ್ಕೆ ಅವನನ್ನು ಎತ್ತಬೇಕೆಂದೂ ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದೂ ತೀರ್ಮಾನಿಸುತ್ತೇನೆ.


ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ - ಅಗೋ, ಆ ಏಲಾಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವದನ್ನು ಕಂಡೆನು ಎಂದು ಹೇಳಲು ಯೋವಾಬನು ಅವನಿಗೆ -


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.


ಆಯಿ ಎಂಬ ಊರಿನ ಅರಸನನ್ನು ಸಾಯಂಕಾಲದವರೆಗೂ ಮರದಲ್ಲಿ ನೇತುಹಾಕಿಸಿ ಸೂರ್ಯನು ಅಸ್ತವಿುಸುತ್ತಲೇ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರು ಬಾಗಲಲ್ಲಿ ಹಾಕಿಸಿಬಿಟ್ಟು ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರಕ್ಕೆ ತೂಗಹಾಕಿದರೆ ಅದು ರಾತ್ರಿಯಲ್ಲಿಯೂ ಮರದ ಮೇಲೆ ಇರಬಾರದು;


ಆದರೆ ಮುಖ್ಯ ಭಕ್ಷ್ಯಕಾರನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದ್ದಂತೆಯೇ ಆಯಿತು.


ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ಎತ್ತಿಸುವನು; ನಿನ್ನನ್ನು ಮರಕ್ಕೆ ತೂಗಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.


ಹೀಗಿರುವದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡು ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು;


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು.


ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.


ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ - ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಹೆಸರುಗಳುಳ್ಳ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು, ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು, ಅನತೋತ ಊರಿನವರಾದ ಯೇಹು ಬೆರಾಕಾರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು