Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:7 - ಕನ್ನಡ ಸತ್ಯವೇದವು J.V. (BSI)

7 ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಸಿ ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ತಮಗೂ, ದಾವೀದನಿಗೂ, ಸೌಲನ ಮಗ ಯೋನಾತಾನನಿಗೂ ಯೆಹೋವ ದೇವರನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:7
16 ತಿಳಿವುಗಳ ಹೋಲಿಕೆ  

ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೇಗಂದರೆ - ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ ಐದು ವರುಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.


ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು; ದಾವೀದನು ಹೋರೆಷದಲ್ಲಿಯೇ ಇದ್ದನು.


ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾಗಿ ನಿನ್ನ ದಯವಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂವಿುಯಿಂದ ತೆಗೆದುಹಾಕಿದ ಮೇಲಾದರೂ ಅದು ನನ್ನ ಮನೆಯಿಂದ ಅಗಲದಿರಲಿ.


ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಒಡಂಬಡಿಕೆಮಾಡಿಕೊಂಡನು.


ನೀನೂ ನಿನ್ನ ಮಕ್ಕಳೂ ದಾಸರೂ ನಿನ್ನ ಯಜಮಾನನ ಮೊಮ್ಮಗನಿಗೋಸ್ಕರ ಆ ಭೂವಿುಯನ್ನು ವ್ಯವಸಾಯ ಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವದು ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ ಇಪ್ಪತ್ತು ಮಂದಿ ಸೇವಕರೂ ಇದ್ದರು.


ಸೇವಕನ ಮೇಲೆ ದಯವಿರಲಿ. ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ; ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವದೇಕೆ? ನೀನೇ ಕೊಂದುಹಾಕು ಎಂದು ಹೇಳಿದನು.


ಅನಂತರ ಯೋನಾತಾನನು ದಾವೀದನಿಗೆ - ಸಮಾಧಾನದಿಂದ ಹೋಗು; ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ; ಆತನೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು; ಯೋನಾತಾನನು ಊರೊಳಕ್ಕೆ ಬಂದನು.


ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣ ಮಾಡಿಸಿದನು.


ಇವನು ಯೆರೂಸಲೇವಿುನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು - ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ ಎಂದು ಕೇಳಲು


ಆಗ ಅರಸನು ಅವನಿಗೆ - ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ ಎಂದು ಹೇಳಲು ಅವನು - ಅರಸನೇ, ನಿನಗೆ ಸಾಷ್ಟಾಂಗ ನಮಸ್ಕಾರಮಾಡುತ್ತೇನೆ; ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದನು.


ಆಗ ದಾವೀದನು ಅವನಿಗೆ - ಹೆದರಬೇಡ; ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂವಿುಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಮತ್ತು ನೀನು ಪ್ರತಿದಿನ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು ಎಂದು ಹೇಳಿದನು.


ಅವರಿಬ್ಬರೂ ಅಡವಿಗೆ ಹೋದ ಮೇಲೆ ಯೋನಾತಾನನು ದಾವೀದನಿಗೆ - ಇಸ್ರಾಯೇಲ್‍ದೇವರಾದ ಯೆಹೋವನೇ ಸಾಕ್ಷಿ; ನಾನು ನಾಳೆ ಇಲ್ಲವೆ ನಾಡದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ ನಿನ್ನ ಮೇಲೆ ಅವನಿಗೆ ದಯವುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.


[ಒಂದು ದಿವಸ] ದಾವೀದನು - ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿರುತ್ತಾರೋ? ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ ಅನ್ನಲು


ಒರಟು ಮೋರೆಯು ಮಾರ್ಪಡುವದು. ದೇವರ ಮೇಲೆ ಇಟ್ಟ ಆಣೆಯ ನಿವಿುತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬದು ನನ್ನ ಬೋಧೆ.


ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.


ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು - ಮೆಫೀಬೋಶೆತನೇ ಅನ್ನಲು ಅವನು - ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು