Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:15 - ಕನ್ನಡ ಸತ್ಯವೇದವು J.V. (BSI)

15 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿ ಬಿಟ್ಟನು; ಸಿಡಿಲಿನಿಂದ ಕಳವಳಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಚದರಿಸಿದನು ಶತ್ರುಗಳನು ಬಾಣಗಳನೆಸೆದು ತಳಮಳಗೊಳಿಸಿದನವರನು ಸಿಡಿಲನು ಹೊಡೆದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತನಿಂದ ಹೊರಟ ಬಾಣಗಳು ಶತ್ರುಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿದವು. ಆತನು ಸಿಡಿಲನ್ನು ಉಂಟುಮಾಡಿದನು, ಜನರು ಭೀತಿಯಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು, ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:15
8 ತಿಳಿವುಗಳ ಹೋಲಿಕೆ  

ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರೋಧವಾಗಿ ಪ್ರಯೋಗಿಸುವೆನು.


ನಿನ್ನ ಹಾರುವ ಬಾಣಗಳ ಬೆಳಗಿಗೂ ನಿನ್ನ ವಿುಂಚುವ ಈಟಿಯ ಹೊಳಪಿಗೂ ಸೂರ್ಯಚಂದ್ರರು ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.


ಯೆಹೋವನು ಇಸ್ರಾಯೇಲ್ಯರ ಮುಂದೆ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಪೂರ್ಣವಾಗಿ ಸೋಲಿಸಿ ಬೇತ್‍ಹೋರೋನ್ ಎಂಬ ಗಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜವಿರೋಧಿಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.


ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.


ಸಮುವೇಲನು ಯಜ್ಞವನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕೋಸ್ಕರ ಸಮೀಪಿಸಲಾಗಿ ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲ್ಯರಿಗೆ ಸೋತು ಓಡಿಹೋಗುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು