Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:19 - ಕನ್ನಡ ಸತ್ಯವೇದವು J.V. (BSI)

19 ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು; ಆಗ ಯೆಹೋವನು ನನಗೆ ಉದ್ಧಾರಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ಮೇಲೆರಗಿದ್ದರಾ ಹಗೆಗಳು ದುರಂತ ಕಾಲದಲಿ ನನಗುದ್ಧಾರಕನಾದ ಸರ್ವೇಶ್ವರನು, ಆ ವಿಪತ್ಕಾಲದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಶತ್ರುಗಳು ನನಗೆ ಮುತ್ತಿಗೆ ಹಾಕಿದಾಗ ನಾನು ತೊಂದರೆಯಲ್ಲಿದ್ದೆನು. ಆದರೆ ನನಗೆ ಯೆಹೋವನು ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:19
12 ತಿಳಿವುಗಳ ಹೋಲಿಕೆ  

ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು