Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:20 - ಕನ್ನಡ ಸತ್ಯವೇದವು J.V. (BSI)

20 ಆತನು ನನ್ನನ್ನು ಬಿಡಿಸಿ ವಿಶಾಲಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ ಅಕ್ಕರೆಯಿಂದ ಮೆಚ್ಚಿ ನನಗಾದನು ರಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆತನು ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ತಂದನು. ಆತನು ನನ್ನನ್ನು ಪ್ರೀತಿಸಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:20
16 ತಿಳಿವುಗಳ ಹೋಲಿಕೆ  

ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ ನನ್ನನ್ನು ವಿಶಾಲಸ್ಥಳದಲ್ಲಿ ಇಟ್ಟನು.


ಆತನು - ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ತೋರಿಸಿದರೆ ತನಗೆ ಸರಿಕಂಡಂತೆ ಮಾಡಲಿ, ಆತನ ಚಿತ್ತ ಅಂದನು.


ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ ಎಂದು ಹೇಳುತ್ತಾರೆ.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಇಸ್ರಾಯೇಲು ಅಗಡುಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲಸ್ಥಳದಲ್ಲಿ ಮೇಯಿಸುವನೋ?


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ಅಗೆಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದದರಿಂದ ಅವನು - ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದಾನಾದದರಿಂದ ಅಭಿವೃದ್ಧಿಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.


ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದರಿಂದ ನನ್ನ ಹರಡುಗಳು ಕದಲುವದಿಲ್ಲ.


ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣುಗುಡ್ಡು ಸೇದಿಕೊಂಡಿದೆ; ದೇಹಾತ್ಮಗಳು ಕುಗ್ಗಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು