Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:28 - ಕನ್ನಡ ಸತ್ಯವೇದವು J.V. (BSI)

28 ದೀನರನ್ನು ಉದ್ಧರಿಸುತ್ತೀ; ಹವ್ಮಿುನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೀನದಲಿತರನು ಉದ್ಧರಿಸುವನು ಗರ್ವಿಗಳನು ಗುರುತಿಸಿ ತಗ್ಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀನು ದೀನರನ್ನು ಮೇಲಕ್ಕೆತ್ತುವೆ; ಗರ್ವಿಷ್ಠರನ್ನಾದರೋ ತುಳಿದುಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೀನರನ್ನು ರಕ್ಷಿಸುತ್ತೀರಿ; ಆದರೆ ನೀವು ಗರ್ವಿಷ್ಠರನ್ನು ತಗ್ಗಿಸಲು ನಿಮ್ಮ ಕಣ್ಣುಗಳು ಅವರ ಮೇಲೆ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:28
23 ತಿಳಿವುಗಳ ಹೋಲಿಕೆ  

ಕುಲಹೀನರು ಬೊಗ್ಗುವರು, ಕುಲೀನರು ಕುಗ್ಗುವರು, ಉನ್ನತರ ದೃಷ್ಟಿಯು ತಗ್ಗುವದು.


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ಗರ್ವದ ದೃಷ್ಟಿ ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


ಯೆಹೋವನು ದೀನರ ವ್ಯಾಜ್ಯವನ್ನು ನಡಿಸುವನೆಂತಲೂ ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಯೆಹೋವನೇ, ನನ್ನ ಎದೆಯಲ್ಲಿ ಹವ್ಮಿುಲ್ಲ; ನನಗೆ ಸೊಕ್ಕಿನ ಕಣ್ಣಿಲ್ಲ; ಅಸಾಧ್ಯಕಾರ್ಯಗಳಲ್ಲಿ ಕೈಹಾಕುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು