Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:36 - ಕನ್ನಡ ಸತ್ಯವೇದವು J.V. (BSI)

36 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ದೇವರೇ, ನೀನು ನನ್ನನ್ನು ಸಂರಕ್ಷಿಸಿ ಜಯಹೊಂದಲು ನನಗೆ ಸಹಾಯಮಾಡಿರುವೆ. ನನ್ನ ಶತ್ರುವನ್ನು ಸೋಲಿಸಲು ನೀನು ನನಗೆ ಸಹಾಯ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ, ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:36
8 ತಿಳಿವುಗಳ ಹೋಲಿಕೆ  

ಮತ್ತು ನಂಬಿಕೆಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.


ಯೆಹೋವನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.


ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು