Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:40 - ಕನ್ನಡ ಸತ್ಯವೇದವು J.V. (BSI)

40 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು ತಗ್ಗಿಸಿದೆ ಎದುರಾಳಿಗಳ ನನಗಧೀನ ಮಾಡಿಬಿಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ದೇವರೇ, ನೀನು ನನ್ನನ್ನು ಯುದ್ಧಕ್ಕಾಗಿ ಬಲಪಡಿಸಿರುವೆ. ನನ್ನ ಶತ್ರುಗಳನ್ನು ನನಗೆ ಅಧೀನರಾಗುವಂತೆ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ; ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:40
11 ತಿಳಿವುಗಳ ಹೋಲಿಕೆ  

ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.


ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ನನ್ನ ಪ್ರೀತಿಯೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ಆಶ್ರಯವೂ ನನ್ನ ಜನವನ್ನು ನನಗೆ ಅಧೀನಮಾಡಿದವನೂ ಆತನೇ.


ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ ನನ್ನ ಮಾರ್ಗವನ್ನು ಸರಾಗಮಾಡುವವನೂ ಆತನೇ.


ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.


ಶಾಪವೇ ಅವನ ಹೊದಿಕೆಯೂ ನಿತ್ಯವಾದ ನಡುಕಟ್ಟೂ ಆಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು