Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:41 - ಕನ್ನಡ ಸತ್ಯವೇದವು J.V. (BSI)

41 ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ; ನನ್ನ ಹಗೆಯವರನ್ನು ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆ ಶತ್ರುಗಳೋಡಿದರು ನನಗೆ ಬೆಂಗೊಟ್ಟು ಆ ಹಗೆಗಳನು ನಿರ್ಮೂಲಮಾಡಿದೆ ನಾ ಗುರಿಯಿಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:41
8 ತಿಳಿವುಗಳ ಹೋಲಿಕೆ  

ನೀವು ಹೋಗುವ ಎಲ್ಲಾ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ ಕಳವಳವನ್ನು ಉಂಟು ಮಾಡಿ ನಿಮ್ಮನ್ನು ವಿರೋಧಿಸುವವರನ್ನು ಓಡಿಹೋಗುವಂತೆ ಮಾಡುವೆನು.


ಅವರನ್ನು ತನ್ನ ಬಳಿಗೆ ತಂದಮೇಲೆ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರಿಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ - ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ ಎಂದು ಹೇಳಲು ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು