Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:43 - ಕನ್ನಡ ಸತ್ಯವೇದವು J.V. (BSI)

43 ಭೂವಿುಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು; ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಪುಡಿಪುಡಿ ಮಾಡಿದೆ ನಾನವರನು ಮಣ್ಣಿನ ಹೆಂಟೆಯಂತೆ ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ. ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:43
15 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.


ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.


ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ನೂಕಿಬಿಡಲಿ.


ಗಾಳಿಯಿಂದ ಬಡಿಸಿಕೊಂಡು ಹೋಗುವ ದೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;


ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ


ನಾನು ಬಡಗಲಿಂದ ಒಬ್ಬನನ್ನು ಎಬ್ಬಿಸಿ ಕರತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿಂದ ಬಂದಿದ್ದಾನೆ; ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಮೇಲೆ ಬಿದ್ದು ಕುಂಬಾರನು ಜೇಡಿಯನ್ನು ತುಳಿಯುವ ಹಾಗೆ ತುಳಿಯುವನು.


ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು; ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ದೊಡ್ಡದುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು