Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:46 - ಕನ್ನಡ ಸತ್ಯವೇದವು J.V. (BSI)

46 ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಎದೆಗುಂದಿದವರಾದರು ಆ ವಿದೇಶಿಯರು ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಅನ್ಯದೇಶದ ಜನರು ಭಯಗೊಳ್ಳುವರು; ತಾವು ಅಡಗಿದ್ದ ಸ್ಥಳಗಳಿಂದ ನಡುಗುತ್ತಾ ಹೊರಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:46
7 ತಿಳಿವುಗಳ ಹೋಲಿಕೆ  

ಹಾವಿನಂತೆ ದೂಳನ್ನು ನೆಕ್ಕುವರು; ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು; ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ ಸಮೀಪಿಸಿ ನಿನಗೆ ಭಯಪಡುವರು.


ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು;


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಆತನ ಭಯಂಕರತನಕ್ಕೂ ಅತ್ಯುನ್ನತಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ ಚೂಪಾದ ಶಿಲೆಗಳ ಸೀಳುಗಳಲ್ಲಿಯೂ ನುಗ್ಗುವರು.


ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು.


ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು - ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ ಎಂದು ತಮ್ಮೊಳಗೆ ಮಾತಾಡಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು