Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:5 - ಕನ್ನಡ ಸತ್ಯವೇದವು J.V. (BSI)

5 ಮರಣಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕುತ್ತಿಗೆಗೆ ಬಂದಿದ್ದವು ಸಾವಿನ ಅಲೆಗಳು ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮರಣದಲೆಗಳು ನನ್ನನ್ನು ಆವರಿಸಿಕೊಂಡವು. ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:5
12 ತಿಳಿವುಗಳ ಹೋಲಿಕೆ  

ನನ್ನನ್ನು ಸಮುದ್ರದ ಉದರದಲ್ಲಿ, ಅಗಾಧಸ್ಥಳದಲ್ಲಿ ಎಸೆದುಬಿಟ್ಟಿಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ನಿನ್ನ ಅಲೆಗಳೂ ತೆರೆಗಳೂ ನನ್ನ ಮೇಲ್ಗಡೆ ಹಾದುಹೋಗುತ್ತಿದ್ದವು.


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡಿ - ಬಾ, ಬಹಳ ನೀರುಗಳ ಮೇಲೆ ವಾಸಿಸಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.


ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.


ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು