Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:6 - ಕನ್ನಡ ಸತ್ಯವೇದವು J.V. (BSI)

6 ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರ್ಲುಗಳು ನನ್ನೆದುರಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸುತ್ತಿಕೊಂಡಿದ್ದವು ಪಾತಾಳಪಾಶಗಳು ನನ್ನ ಕಣ್ಮುಂದಿದ್ದವು ಮರಣಕರ ಉರುಲುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪಾತಾಳದ ಪಾಶಗಳು ನನ್ನನ್ನು ಸುತ್ತುವರೆದಿವೆ; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:6
10 ತಿಳಿವುಗಳ ಹೋಲಿಕೆ  

ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ಇಕ್ಕಟ್ಟಿನಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಕೂಗಿಕೊಂಡೆನು, ಆಹಾ, ನನ್ನ ಧ್ವನಿಯನ್ನು ಲಾಲಿಸಿದಿ.


ಯೆಹೋವನ ಭಯ ಜೀವದ ಬುಗ್ಗೆ; ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನ.


ಜ್ಞಾನಿಯ ಬೋಧೆ ಜೀವದ ಬುಗ್ಗೆ; ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.


ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.


ಅವರು ಒಂದು ವೇಳೆ ಬಂಧಕ್ಕೆ ಸಿಕ್ಕಿ ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,


ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು