Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:16 - ಕನ್ನಡ ಸತ್ಯವೇದವು J.V. (BSI)

16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲೊಲ್ಲದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:16
12 ತಿಳಿವುಗಳ ಹೋಲಿಕೆ  

ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು.


ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದುಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನು ಒಬ್ಬನಾಗಿದ್ದನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.


ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ದೇವಸ್ಥಾನದಲ್ಲಿ ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.


ಕೂಡಲೆ ಆ ಮೂರು ಮಂದಿ ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು.


ಒಬ್ಬೊಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಎದುರಾಗಿ ನಿಲ್ಲಬಹುದು; ಮೂರು ಹುರಿಯ ಹಗ್ಗ ಬೇಗ ಕಿತ್ತು ಹೋಗುವದಿಲ್ಲವಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು