Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:18 - ಕನ್ನಡ ಸತ್ಯವೇದವು J.V. (BSI)

18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:18
11 ತಿಳಿವುಗಳ ಹೋಲಿಕೆ  

ಇವರು ಓಡಿಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವದನ್ನು ಬಿಟ್ಟು ಯೆರೂಸಲೇವಿುಗೆ ಹೋದನು.


ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು ಅವನಿಗೆ -


ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ - ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.


ಚೆರೂಯ ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ್, ಅಸಾಹೇಲ್ ಎಂಬ ಮೂವರು ಚೆರೂಯಳ ಮಕ್ಕಳು.


ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನನ್ನು ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರುಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ; ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಮುಂದೆ ನಡೆದಾಗ


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದದರಿಂದ ಅವರು ಇವನನ್ನು ಕೊಂದುಹಾಕಿದರು.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಇವರಲ್ಲಿ ಘನವುಳ್ಳವನೂ ನಾಯಕನೂ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.


ಒಬ್ಬೊಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಎದುರಾಗಿ ನಿಲ್ಲಬಹುದು; ಮೂರು ಹುರಿಯ ಹಗ್ಗ ಬೇಗ ಕಿತ್ತು ಹೋಗುವದಿಲ್ಲವಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು