Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:22 - ಕನ್ನಡ ಸತ್ಯವೇದವು J.V. (BSI)

22 ಈ ಪರಾಕ್ರಮ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ಪರಾಕ್ರಮ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋಯಾದಾವನ ಮಗನಾದ ಬೆನಾಯನು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದನು. ಬೆನಾಯನು ಆ ಮೂವರು ಪರಾಕ್ರಮಿಗಳಷ್ಟೇ ಪ್ರಸಿದ್ಧನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:22
5 ತಿಳಿವುಗಳ ಹೋಲಿಕೆ  

ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡಿಸಿದನು. ದೃಷ್ಟಾಂತ - ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.


ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.


ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ [ಮೊದಲಿನ] ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.


ಆಗ ಅವನು ಯೋವಾಬನ ಸೈನಿಕರನ್ನೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳನ್ನೂ ಎಲ್ಲಾ ಶೂರರನ್ನೂ ಕರಕೊಂಡು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಯೆರೂಸಲೇವಿುನಿಂದ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು