2 ಸಮುಯೇಲ 23:4 - ಕನ್ನಡ ಸತ್ಯವೇದವು J.V. (BSI)4 ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ ಮೋಡಗಳನ್ನು ಚದರಿಸಿಬಿಟ್ಟು ಮಳೆಬಿದ್ದ ಭೂವಿುಯಿಂದ ಹುಲ್ಲನ್ನು ಮೊಳಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ ಮೋಡಗಳೇ ಇಲ್ಲದ ಮುಂಜಾನೆಯಂತೆಯೂ ಮಳೆ ಬಿದ್ದನಂತರ ಬರುವ ಸೂರ್ಯನ ಬೆಳಕಿನಂತೆಯೂ ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೋಡವಿಲ್ಲದ ಮುಂಜಾನೆ ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. ಭೂಮಿಯಿಂದ ಹುಲ್ಲು ಮೊಳೆಯಿಸುವ ಮಳೆಯ ನಂತರದ ಪ್ರಕಾಶದಂತಿರುವನು.’ ಅಧ್ಯಾಯವನ್ನು ನೋಡಿ |