2 ಸಮುಯೇಲ 23:5 - ಕನ್ನಡ ಸತ್ಯವೇದವು J.V. (BSI)5 ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ. ಅಧ್ಯಾಯವನ್ನು ನೋಡಿ |