Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:15 - ಕನ್ನಡ ಸತ್ಯವೇದವು J.V. (BSI)

15 ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರುಜಿನಗಳನ್ನು ಬರಮಾಡಿದನು. ಇವು ಹೊತ್ತಾರೆಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದುವರಿದವು. ದಾನ್‌ನಿಂದ ಬೇರ್ಷೆಬದವರೆಗೆ ಎಪ್ಪತ್ತುಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:15
11 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು; ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ ಇದರ ನಿವಿುತ್ತ ಇಸ್ರಾಯೇಲ್ಯರ ಮೇಲೆ ದೇವರ ಕೋಪವುಂಟಾದದರಿಂದ ಅದನ್ನು ಪೂರ್ತಿಗೊಳಿಸಲಿಲ್ಲ. ಈ ಖಾನೇಷುಮಾರಿಯು ದಾವೀದನ ರಾಜ್ಯ ವೃತ್ತಾಂತಗ್ರಂಥದಲ್ಲಿ ಲಿಖಿತವಾಗಲಿಲ್ಲ.


ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು; ಆ ವರ್ಗದಲ್ಲಿ ವಿುಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.


ಬೇತ್‍ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಹಣಿಕಿನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಇದಲ್ಲದೆ ಐವತ್ತು ಸಾವಿರ ಜನರು ಮರಣಹೊಂದಿದರು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನುಂಟುಮಾಡಿದದರಿಂದ ಬೇತ್‍ಷೆಮೆಷಿನವರು ಗೋಳಾಡಿ -


ಆ ವ್ಯಾಧಿಯಿಂದ ಇಪ್ಪತ್ತನಾಲ್ಕುಸಾವಿರ ಮಂದಿ ಸತ್ತರು.


ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ - ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಾಯೇಲ್‍ಕುಲಗಳ ಎಲ್ಲಾ ಜನರನ್ನು ಲೆಕ್ಕಮಾಡಿಕೊಂಡು ಬಾ ಎಂದು ಅವನಿಗೆ ಆಜ್ಞಾಪಿಸಿದನು.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು