Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:17 - ಕನ್ನಡ ಸತ್ಯವೇದವು J.V. (BSI)

17 ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನರನ್ನು ಕೊಂದ ದೂತನನ್ನು ದಾವೀದನು ನೋಡಿ ಯೆಹೋವನೊಂದಿಗೆ ಮಾತನಾಡಿದನು. ದಾವೀದನು ಯೆಹೋವನಿಗೆ, “ನಾನು ಪಾಪ ಮಾಡಿದೆನು. ನಾನು ತಪ್ಪು ಮಾಡಿದೆನು. ಆದರೆ ಈ ಜನರು ಕೇವಲ ಕುರಿಗಳಂತೆ ನಿರಪರಾಧಿಗಳು. ಅವರು ಯಾವ ತಪ್ಪನ್ನೂ ಮಾಡಲಿಲ್ಲ. ದಯಮಾಡಿ ನಿನ್ನ ದಂಡನೆಯು ನನಗೆ ಮತ್ತು ನನ್ನ ತಂದೆಯ ಕುಲದ ವಿರುದ್ಧವಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:17
23 ತಿಳಿವುಗಳ ಹೋಲಿಕೆ  

ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ಖಾನೇಷುಮಾರಿ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿಯು ಹಂಗಿಸತೊಡಗಿತು. ಆದದರಿಂದ ಅವನು ಯೆಹೋವನನ್ನು - ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ಪ್ರಾರ್ಥಿಸಿದನು.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಕುರಿಗಳನ್ನೋ ಎಂಬಂತೆ ನಮ್ಮನ್ನು ಘಾತುಕರಿಗೆ ಒಪ್ಪಿಸಿದ್ದೀ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿಬಿಟ್ಟಿದ್ದೀ.


ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ಆದದರಿಂದ ಸೇವಕನಾದ ನಾನು ಈ ಹುಡುಗನಿಗೆ ಬದಲಾಗಿ ಸ್ವಾವಿುಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ಆಗ ಅಬ್ರಹಾಮನು ಹತ್ತಿರಕ್ಕೆ ಬಂದು - ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.


ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ನಿಮ್ಮ ಮೇಲೆ ಎದ್ದಿರುವ ಸಮುದ್ರವು ಶಾಂತವಾಗುವದು; ಈ ದೊಡ್ಡ ತುಫಾನು ನಿಮಗೆ ಸಂಭವಿಸಿದ್ದು ನನ್ನ ನಿವಿುತ್ತವೇ ಎಂಬದು ನನಗೆ ಗೊತ್ತು ಎಂದುತ್ತರಕೊಟ್ಟನು.


ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರಿಸಿ - ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ಪಾಪಮಾಡಿದ್ದೇನೆ;


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


[ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.


ಮರೀಕುರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವಾಸ್ತ್ಯವಾಗಿರುವ ಇಸ್ರಾಯೇಲ್ಯರನ್ನು ಸಾಕುವದಕ್ಕೆ ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು