Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:18 - ಕನ್ನಡ ಸತ್ಯವೇದವು J.V. (BSI)

18 ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ - ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ದಿನ ಗಾದನು ದಾವೀದನ ಬಳಿಗೆ ಬಂದು, “ಹೋಗಿ, ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:18
6 ತಿಳಿವುಗಳ ಹೋಲಿಕೆ  

ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ -


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.


ಸೊಲೊಮೋನನು ಯೆರೂಸಲೇಮ್ ಪಟ್ಟಣದೊಳಗೆ ತನ್ನ ತಂದೆಯಾದ ದಾವೀದನಿಗೆ ದೇವದರ್ಶನವುಂಟಾದ ಮೋರೀಯಾ ಗುಡ್ಡದಲ್ಲಿ ಯೆಹೋವನ ಆಲಯವನ್ನು ಕಟ್ಟಿಸ ತೊಡಗಿದನು. ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.


ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು