Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:5 - ಕನ್ನಡ ಸತ್ಯವೇದವು J.V. (BSI)

5 ಅವರು ಯೊರ್ದನ್ ಹೊಳೆಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಜೋರ್ಡನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಜೋರ್ಡನ್ ನದಿಯನ್ನು ದಾಟಿ ಅರೋಯೇರಿನಲ್ಲಿ ಪಾಳೆಯ ಮಾಡಿಕೊಂಡರು. ಅವರ ಪಾಳೆಯವು ನಗರದ ಬಲ ಅಂಚಿನಲ್ಲಿತ್ತು. (ಆ ನಗರವು ಗಾದ್ ಕಣಿವೆಯ ಮಧ್ಯಭಾಗದಲ್ಲಿಯೂ ಯಗ್ಜೇರಿನ ಮಾರ್ಗದಲ್ಲಿಯೂ ಇತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:5
12 ತಿಳಿವುಗಳ ಹೋಲಿಕೆ  

ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇದ್ದ ಪಟ್ಟಣವು ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲಸೀಮೆ,


ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.


ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ, ಆ ತಗ್ಗಿನ ಮಧ್ಯದಲ್ಲಿದ್ದ ಪಟ್ಟಣ ಇವುಗಳೂ


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,


ಯೆಹೋವನು ಇಸ್ರಾಯೇಲ್ಯರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ದನಕುರಿಗಳ ಮೇವಿಗೆ ತಕ್ಕ ಪ್ರದೇಶ.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶಗಳನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡು


ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲ್ಯರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.


ಆರೋಯೇರಿನ ಪಟ್ಟಣಗಳು ನಿರ್ಜನವಾಗಿ ಮಂದೆಗಳಿಗೆ ಆಸರೆಯಾಗುವವು; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.


ಅರೋಯೇರಿನವರು, ಸಿಪ್ಮೋತಿನವರು, ಎಷ್ಟೆಮೋವದವರು,


ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್ ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,


ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದದರಿಂದ ಅವರು ಇಸ್ರಾಯೇಲ್ಯರನ್ನು ಲೆಕ್ಕಿಸುವದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು