Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:14 - ಕನ್ನಡ ಸತ್ಯವೇದವು J.V. (BSI)

14 ಮತ್ತು ಅವನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು ಎಂಬದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಹೆಂಡತಿಯಾದ ಮೀಕಲಳನ್ನು ನನ್ನ ಬಳಿಗೆ ಕಳುಹಿಸು. ಅವಳನ್ನು ನನಗೆ ಕೊಡುವುದಾಗಿ ಮಾತುಕತೆಯಾಗಿತ್ತು. ಅವಳನ್ನು ಪಡೆಯಲು ನಾನು ನೂರು ಜನ ಫಿಲಿಷ್ಟಿಯರನ್ನು ಕೊಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:14
7 ತಿಳಿವುಗಳ ಹೋಲಿಕೆ  

ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ ಅಲ್ಲಿನ ಇನ್ನೂರು ಜನರನ್ನು ಕೊಂದು ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗುವದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು;


ಆಗ ಅವನು ಅವರಿಗೆ - ನೀವು ಹೋಗಿ ದಾವೀದನಿಗೆ - ಅರಸನು ತೆರವನ್ನು ಅಪೇಕ್ಷಿಸುವದಿಲ್ಲ; ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆಂದು ಹೇಳಿರಿ ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬದೇ ಇದಕ್ಕೆ ಕಾರಣ.


(ಸೌಲನ ಮಗನಾದ ಈಷ್ಬೋಶೆತನು ನಾಲ್ವತ್ತು ವರುಷದವನಾದಾಗ ಇಸ್ರಾಯೇಲ್ಯರನ್ನು ಆಳತೊಡಗಿ ಎರಡು ವರುಷ ರಾಜ್ಯಭಾರಮಾಡಿದನು.) ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.


ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು.


ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆಮಾಡಿಕೊಟ್ಟನು.


ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ತರಿಸಿದನು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಿಕಿ ನೋಡಿ ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ ಕುಣಿಯುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು