Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:24 - ಕನ್ನಡ ಸತ್ಯವೇದವು J.V. (BSI)

24 ಅರಸನ ಬಳಿಗೆ ಹೋಗಿ - ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ; ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅರಸನ ಬಳಿಗೆ ಹೋಗಿ, “ನೀವು ಮಾಡಿದ್ದೇನು? ಅಬ್ನೇರನು ನಿಮ್ಮ ಬಳಿಗೆ ಬಂದಿದ್ದನಂತೆ; ನೀವು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೋವಾಬನು ರಾಜನ ಬಳಿಗೆ ಬಂದು, “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದರೂ ಅವನನ್ನು ದಂಡಿಸದೆ ಯಾಕೆ ಕಳುಹಿಸಿಬಿಟ್ಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:24
8 ತಿಳಿವುಗಳ ಹೋಲಿಕೆ  

ಪಿಲಾತನು - ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನವೂ ಮಹಾಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿದ್ದಕ್ಕೆ


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಅಬ್ನೇರನು ಈ ಮಾತನ್ನು ಕೇಳಿ ಉರಿಗೊಂಡು ಈಷ್ಬೋಶೆತನಿಗೆ - ಈವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ವಿುತ್ರರಿಗೂ ದಯೆತೋರಿಸುತ್ತಿದ್ದೆನಲ್ಲಾ; ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವದಕ್ಕೆ ನಾನೇನು ಯೆಹೂದನಾಯಿಯ ತಲೆಯೋ?


ಈ ಮಾತುಗಳನ್ನು ಕೇಳಿ ಬಾಲಾಕನು ಅವನಿಗೆ - ಇದೇನು ನೀನು ನನಗೆ ಮಾಡಿದ್ದು; ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟಿ ಎಂದು ಹೇಳಿದನು.


ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು - ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು


ನೇರನ ಮಗನಾದ ಅಬ್ನೇರನ ಸಂಗತಿಯು ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳುಕೊಳ್ಳುವದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬದನ್ನು ಕಂಡು ಹಿಡಿಯುವದಕ್ಕೂ ಬಂದಿದ್ದನಷ್ಟೆ ಎಂದು ಹೇಳಿ


ಆಗ ಫರೋಹನು ಅಬ್ರಾಮನನ್ನು ಕರಿಸಿ - ಯಾಕೆ ಹೀಗೆ ಮಾಡಿದೆ? ಹೆಂಡತಿಯೆಂದು ಯಾಕೆ ನನಗೆ ತಿಳಿಸಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು