Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:26 - ಕನ್ನಡ ಸತ್ಯವೇದವು J.V. (BSI)

26 ದಾವೀದನನ್ನು ಬಿಟ್ಟು ಹೊರಗೆ ಹೋಗಿ ಅಬ್ನೇರನನ್ನು ಕರತರುವಂತೆ ದೂತರನ್ನು ಅಟ್ಟಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರಕೊಂಡುಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ದಾವೀದನನ್ನು ಬಿಟ್ಟು ಹೊರಗೆ ಹೋಗಿ ಅಬ್ನೇರನನ್ನು ಕರೆದುತರುವಂತೆ ದೂತರನ್ನು ಅಟ್ಟಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡುಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೋವಾಬನು ದಾವೀದನನ್ನು ಬಿಟ್ಟು, ಅಬ್ನೇರನನ್ನು ಸಿರಾ ಬಾವಿಯ ಬಳಿಯಿಂದ ಕರೆತರಲು ದೂತರನ್ನು ಕಳುಹಿಸಿದನು. ಅಬ್ನೇರನನ್ನು ದೂತರು ಹಿಂದಕ್ಕೆ ಕರೆತಂದರು. ಈ ಸಂಗತಿಯು ದಾವೀದನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದಾಗ, ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು. ಅವರು ಅವನನ್ನು ಸಿರಾ ಎಂಬ ಬಾವಿಯಿಂದ ತಿರುಗಿ ಕರೆದುಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:26
4 ತಿಳಿವುಗಳ ಹೋಲಿಕೆ  

ನೇರನ ಮಗನಾದ ಅಬ್ನೇರನ ಸಂಗತಿಯು ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳುಕೊಳ್ಳುವದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬದನ್ನು ಕಂಡು ಹಿಡಿಯುವದಕ್ಕೂ ಬಂದಿದ್ದನಷ್ಟೆ ಎಂದು ಹೇಳಿ


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು