Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:30 - ಕನ್ನಡ ಸತ್ಯವೇದವು J.V. (BSI)

30 ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದದರಿಂದ ಅವರು ಇವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಸಾಹೇಲನನ್ನು ಗಿಬ್ಯೋನ್ ಯುದ್ಧದಲ್ಲಿ ಅಬ್ನೇರನು ಕೊಂದುಹಾಕಿದನು. ಆದ್ದರಿಂದ ಅಸಾಹೇಲನ ಸಹೋದರರಾದ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:30
5 ತಿಳಿವುಗಳ ಹೋಲಿಕೆ  

ಆ ಜಂತು ಅವನ ಕೈಯಿಂದ ಜೋತಾಡುವದನ್ನು ದ್ವೀಪದವರು ನೋಡಿ - ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಇವನನ್ನು ಬದುಕಗೊಡಿಸುವದಿಲ್ಲವೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.


ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವರೆದುರಿಗೆ ಬಂದನು. ಯುದ್ಧ ವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನು ಅವನನ್ನು ವಂದಿಸುವದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ್ದ ಕತ್ತಿಯು ಒರೆಯಿಂದ ಕೆಳಗೆ ಬಿದ್ದಿತು.


ನರಹತ್ಯಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರಂದರೆ ಹತವಾದವನ ಸಮೀಪಬಂಧುವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು