2 ಸಮುಯೇಲ 3:31 - ಕನ್ನಡ ಸತ್ಯವೇದವು J.V. (BSI)31 ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ - ನಿಮ್ಮ ಬಟ್ಟೆಗಳನ್ನು ಹರಕೊಂಡು ಗೋಣೀತಟ್ಟುಗಳನ್ನು ಕಟ್ಟಿಕೊಂಡು ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡಿಯಿರಿ ಎಂದು ಆಜ್ಞಾಪಿಸಿ ತಾನು ಚಟ್ಟದ ಹಿಂದೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31-32 ದಾವೀದನು ಯೋವಾಬನಿಗೆ ಮತ್ತು ಅವನ ಜೊತೆಯಲ್ಲಿದ್ದ ಜನರಿಗೆಲ್ಲ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು ಮತ್ತು ಶೋಕಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಅಬ್ನೇರನಿಗಾಗಿ ಶೋಕಿಸಿ” ಎಂದು ಹೇಳಿದನು. ರಾಜನಾದ ದಾವೀದನೂ ಶವಸಂಸ್ಕಾರಕ್ಕೆ ಹೋದನು. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಸಮಾಧಿ ಮಾಡಿದರು. ಅಬ್ನೇರನ ಸಮಾಧಿಯ ಹತ್ತಿರ ರಾಜನಾದ ದಾವೀದನೂ ಇತರ ಜನರೂ ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು. ಅಧ್ಯಾಯವನ್ನು ನೋಡಿ |