2 ಸಮುಯೇಲ 3:34 - ಕನ್ನಡ ಸತ್ಯವೇದವು J.V. (BSI)34 ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ನಿನ್ನ ಕಾಲಿಗೆ ಬೇಡಿಗಳು ಬರಲಿಲ್ಲ; ನೀನು ದುಷ್ಟರಿಂದಲೋ ಎಂಬಂತೆ ಹತನಾದಿ ಎಂದು ಶೋಕಗೀತವನ್ನು ಹಾಡಲು ಜನರು ತಿರಿಗಿ ಅತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ. ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಿನ್ನ ಕೈ ಕಂಕಣಬದ್ಧವಾಗಿರಲಿಲ್ಲ, ನಿನ್ನ ಕಾಲಿಗೆ ಬೇಡಿ ಬಿದ್ದಿರಲಿಲ್ಲ, ದುಷ್ಟರಿಂದಲೋ ಎಂಬಂತೆ ನೀನು ಹತನಾದೆಯಲ್ಲಾ!” ಎಂದು ಶೋಕಗೀತೆಯನ್ನು ಹಾಡಿದನು. ಜನರು ಮತ್ತೆ ಕಣ್ಣೀರು ಸುರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅಬ್ನೇರನೇ, ನಿನ್ನ ಕೈಗಳನ್ನು ಹಗ್ಗದಿಂದ ಬಿಗಿದಿರಲಿಲ್ಲ. ನಿನ್ನ ಪಾದಗಳಿಗೆ ಸಂಕೋಲೆಯನ್ನು ತೊಡಿಸಿರಲಿಲ್ಲ. ದುಷ್ಟಜನರೆದುರು ನೀನು ಬಿದ್ದೆಯಲ್ಲ, ನೀನು ಬಿದ್ದು ಸತ್ತೆಯಲ್ಲ.” ಆಗ ಜನರೆಲ್ಲರೂ ಅಬ್ನೇರನಿಗಾಗಿ ಮತ್ತೆ ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನಿನ್ನ ಕೈಗಳು ಕಟ್ಟಿರಲಿಲ್ಲ. ನಿನ್ನ ಕಾಲಿಗೆ ಬೇಡಿ ಹಾಕಿರಲಿಲ್ಲ. ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದು ಹೋದೆ.” ಆಗ ಜನರೆಲ್ಲರು ತಿರುಗಿ ಅವನಿಗೋಸ್ಕರ ಅತ್ತರು. ಅಧ್ಯಾಯವನ್ನು ನೋಡಿ |