Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:6 - ಕನ್ನಡ ಸತ್ಯವೇದವು J.V. (BSI)

6 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡಿಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸೌಲನ ಸೇನೆಗೂ ದಾವೀದನ ಸೇನೆಗೂ ಯುದ್ಧ ನಡೆಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಪ್ರಬಲನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧವು ನಡೆಯುತ್ತಿದ್ದಾಗ ಸೌಲನ ಸೈನ್ಯದಲ್ಲಿ ಅಬ್ನೇರನೇ ಬಲಶಾಲಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೌಲನ ಕುಟುಂಬಕ್ಕೂ ದಾವೀದನ ಕುಟುಂಬಕ್ಕೂ ಯುದ್ಧ ನಡೆಯುತ್ತಿರುವಾಗ, ಅಬ್ನೇರನು ಸೌಲನ ಕುಟುಂಬದಲ್ಲಿ ತನ್ನದೇ ಆದ ಸ್ಥಾನವನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:6
10 ತಿಳಿವುಗಳ ಹೋಲಿಕೆ  

ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ನೀನೇ ಹೋಗಿ ಕಾರ್ಯವನ್ನು ನಡಿಸು; ಧೈರ್ಯದಿಂದ ಯುದ್ಧಮಾಡು. [ಹಾಗೆ ಮಾಡದಿದ್ದರೆ] ದೇವರು ಶತ್ರುಗಳಿಂದ ನಿನ್ನನ್ನು ಅಪಜಯಪಡಿಸುವನು. ಜಯಾಪಜಯಗಳನ್ನುಂಟುಮಾಡುವದಕ್ಕೆ ಆತನು ಶಕ್ತನಾಗಿರುತ್ತಾನಲ್ಲಾ ಅಂದನು.


ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳನ ಭಕ್ತರಿಗೆ - ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ ವಿಚಾರಿಸಿ ನೋಡಿರಿ; ಬಾಳನ ಭಕ್ತರು ಮಾತ್ರ ಅಲ್ಲಿರಬೇಕು ಎಂದು ಹೇಳಿದನು.


ಆರನೆಯವನು ಇತ್ರಾಮನು; ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ.


ಅಹೀಮಾಚನ ಮಗಳಾದ ಅಹೀನೋವಮಳು ಅವನ ಹೆಂಡತಿ; ನೇರನ ಮಗನಾದ ಅಬ್ನೇರನು ಅವನ ಸೇನಾಪತಿಯು; ನೇರನು ಸೌಲನ ಚಿಕ್ಕಪ್ಪನು.


ಬಹುದಿವಸಗಳವರೆಗೆ ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡೆದಿತ್ತು. ದಾವೀದನು ಬಲಗೊಳ್ಳುತ್ತಾ ಬಂದನು, ಸೌಲನ ವಂಶವು ದುರ್ಬಲವಾಗುತ್ತಾ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು