Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:1 - ಕನ್ನಡ ಸತ್ಯವೇದವು J.V. (BSI)

1 ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲ್ಯರೆಲ್ಲರೂ ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲರೆಲ್ಲರು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನ ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿತು; ಅವನ ಕೈಗಳು ಜೋಲುಬಿದ್ದಂತಾದವು; ಇಸ್ರಯೇಲರೆಲ್ಲರು ಕಳವಳಕ್ಕೆ ಈಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೆಬ್ರೋನಿನಲ್ಲಿ ಅಬ್ನೇರನು ಸತ್ತನೆಂಬುದು ಸೌಲನ ಮಗನಾದ ಈಷ್ಬೋಶೆತನಿಗೆ ತಿಳಿಯಿತು. ಈಷ್ಬೋಶೆತನು ಮತ್ತು ಅವನ ಜನರು ಬಹಳ ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ನೇರನು ಹೆಬ್ರೋನಿನಲ್ಲಿ ಮರಣ ಹೊಂದಿದನೆಂದು ಸೌಲನ ಮಗ ಈಷ್ಬೋಶೆತನು ಕೇಳಿದಾಗ, ಅವನು ಧೈರ್ಯವನ್ನು ಕಳೆದುಕೊಂಡನು. ಇಸ್ರಾಯೇಲರೆಲ್ಲರು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:1
11 ತಿಳಿವುಗಳ ಹೋಲಿಕೆ  

ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಕೈಗುಂದಿಸಿ ಕಟ್ಟದ ಹಾಗೆ ಬೆದರಿಸಿದ್ದಲ್ಲದೆ


ಅದರಿಂದ ಎಲ್ಲರ ಕೈ ಜೋಲುಬೀಳುವದು, ಎಲ್ಲರ ಹೃದಯ ಕರಗಿ ನೀರಾಗುವದು;


ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು. ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.


ಆ ದಿನದಲ್ಲಿ ಯೆರೂಸಲೇವಿುಗೆ - ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;


ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.


ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.


ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು.


ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗುವರು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಸೌಲನ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿವಿುಗೆ ಒಯ್ದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು