2 ಸಮುಯೇಲ 5:12 - ಕನ್ನಡ ಸತ್ಯವೇದವು J.V. (BSI)12 ಇದರಿಂದ ದಾವೀದನು - ಯೆಹೋವನು ನನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿ ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದನೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದರಿಂದ ದಾವೀದನು, “ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ” ಎಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ನಿಜವಾಗಿಯೂ ತನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದ್ದಾನೆಂಬುದನ್ನೂ ಆತನು ತನ್ನ ಜನರಾದ ಇಸ್ರೇಲರಿಗಾಗಿ ನನ್ನ ರಾಜ್ಯವನ್ನು ಸ್ಥಿರಪಡಿಸಿದ್ದಾನೆಂತಲೂ ದಾವೀದನು ಇದರ ಮೂಲಕ ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು. ಅಧ್ಯಾಯವನ್ನು ನೋಡಿ |