2 ಸಮುಯೇಲ 5:19 - ಕನ್ನಡ ಸತ್ಯವೇದವು J.V. (BSI)19 ದಾವೀದನು ಯೆಹೋವನನ್ನು - ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿ ಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದಾವೀದನು ಯೆಹೋವನಿಗೆ, “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |