Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:24 - ಕನ್ನಡ ಸತ್ಯವೇದವು J.V. (BSI)

24 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಅವರ ಮೇಲೆ ಬೀಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ಯೆಹೋವ ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:24
7 ತಿಳಿವುಗಳ ಹೋಲಿಕೆ  

ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು


ಆಗ ದೆಬೋರಳು ಬಾರಾಕನಿಗೆ - ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇದೇ; ನಿಶ್ಚಯವಾಗಿ ಆತನು ತಾನೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವನು ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದಿಳಿದನು.


ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು.


ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು ಅಂದನು.


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು