Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:4 - ಕನ್ನಡ ಸತ್ಯವೇದವು J.V. (BSI)

4 ದಾವೀದನು ಮೂವತ್ತು ವರುಷದವನಾದಾಗ ಅರಸನಾಗಿ ನಾಲ್ವತ್ತು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ಮೂವತ್ತು ವರ್ಷದವನಾದಾಗ ಅರಸನಾಗಿ, ನಲ್ವತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾವೀದನು ಮೂವತ್ತು ವರ್ಷದವನಾಗಿದ್ದಾಗ ಅರಸನಾಗಿ ನಾಲ್ವತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ಆಳುವುದಕ್ಕೆ ಪ್ರಾರಂಭಿಸಿದಾಗ ಅವನಿಗೆ ಮೂವತ್ತು ವರ್ಷ ವಯಸ್ಸಾಗಿತ್ತು. ಅವನು ನಲವತ್ತು ವರ್ಷಗಳ ಕಾಲ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಆಳಲು ಪ್ರಾರಂಭಿಸಿದಾಗ, ಮೂವತ್ತು ವರ್ಷದವನಾಗಿದ್ದನು. ಅವನು ನಲವತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:4
7 ತಿಳಿವುಗಳ ಹೋಲಿಕೆ  

ಯೇಸು ಉಪದೇಶಮಾಡುವದಕ್ಕೆ ಪ್ರಾರಂಭಿಸಿದಾಗ ಹೆಚ್ಚುಕಡಿಮೆ ಮೂವತ್ತು ವರುಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು.


ದಾವೀದನ ಆಳಿಕೆಯ ನಾಲ್ವತ್ತನೆಯ ವರುಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಲ್ಲಿ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು;


ದಾವೀದನು ಇಸ್ರಾಯೇಲ್ಯರನ್ನು ಆಳಿದ್ದು ನಾಲ್ವತ್ತು ವರುಷ. ಹೇಗಂದರೆ - ಹೆಬ್ರೋನಿನಲ್ಲಿ ಏಳು ವರುಷ, ಯೆರೂಸಲೇವಿುನಲ್ಲಿ ಮೂವತ್ತ ಮೂರು ವರುಷ ಆಳಿದನು.


ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಮಂದಿ ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರುಷವೂ ಆರು ತಿಂಗಳೂ ಆಳಿದನು; ಮತ್ತು ಯೆರೂಸಲೇವಿುನಲ್ಲಿ ಮೂವತ್ತಮೂರು ವರುಷ ಆಳಿದನು.


ಯೋಸೇಫನು ಐಗುಪ್ತದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರುಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು