Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ಮಂಜೂಷವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ, ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:13
9 ತಿಳಿವುಗಳ ಹೋಲಿಕೆ  

ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವಮಂಜೂಷಕ್ಕೆ ಕೋಲುಗಳನ್ನು ಸಿಕ್ಕಿಸಿ ಅದನ್ನು ಹೆಗಲಿನ ಮೇಲೆ ಹೊತ್ತುಕೊಂಡರು.


ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ


ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷ ಹೊತ್ತಿರುವದನ್ನು ಕಂಡಕೂಡಲೆ ನೀವೂ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿರಿ.


ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ; ದೇವದರ್ಶನದ ಗುಡಾರದ ಸಾಮಾನುಗಳನ್ನು ವಹಿಸುವದೇ ಅವರಿಗೆ ನೇಮಕವಾದ ಕೆಲಸ; ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.


ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.


ತಿರಿಗಿ ಬೇರೆ ಆಳುಗಳನ್ನು ಕರೆದು - ನೀವು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ ಹೋಗಿ - ಇಗೋ, ಅಡಿಗೆ ಸಿದ್ಧವಾಗಿದೆ; ನನ್ನ ಹೋರಿಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಯಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಊಟಕ್ಕೆ ಬನ್ನಿರೆಂಬದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು