Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:15 - ಕನ್ನಡ ಸತ್ಯವೇದವು J.V. (BSI)

15 ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಆರ್ಭಟಿಸುತ್ತಾ ತುತೂರಿ ಊದುತ್ತಾ ಯೆಹೋವನ ಮಂಜೂಷವನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರ ಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಗರಕ್ಕೆ ತರುವಾಗ ದಾವೀದನು ಮತ್ತು ಇಸ್ರೇಲರೆಲ್ಲರು ಸಂತೋಷದಿಂದ ಆರ್ಭಟಿಸಿದರು; ತುತ್ತೂರಿಯನ್ನು ಊದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಪ್ರಕಾರ ದಾವೀದನೂ, ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮಂಜೂಷವನ್ನು ಆರ್ಭಟದಿಂದಲೂ, ತುತೂರಿಯ ಶಬ್ದದಿಂದಲೂ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:15
16 ತಿಳಿವುಗಳ ಹೋಲಿಕೆ  

ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.


ಸರ್ವಜನಾಂಗಗಳಿರಾ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.


ಹೀಗೆ ಎಲ್ಲಾ ಇಸ್ರಾಯೇಲ್ಯರು ಆರ್ಭಟಿಸುತ್ತಾ ಕೊಂಬು ತುತೂರಿಗಳನ್ನು ಗಟ್ಟಿಯಾಗಿ ಊದುತ್ತಾ ತಾಳಹೊಡೆಯುತ್ತಾ ಕಿನ್ನರಿ ಸ್ವರಮಂಡಲಗಳನ್ನು ಬಾರಿಸುತ್ತಾ ಯೆಹೋವನ ನಿಬಂಧನಮಂಜೂಷವನ್ನು ತಂದರು.


ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ನಿಬಂಧನ ಮಂಜೂಷವನ್ನು


ಆಗ ದಾವೀದನು ಲೇವಿಯರ ಪ್ರಧಾನರಿಗೆ - ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ ಕಿನ್ನರಿ ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹ ಧ್ವನಿಮಾಡುವದಕ್ಕಾಗಿ ನೇವಿುಸಿರಿ ಎಂದು ಆಜ್ಞಾಪಿಸಲು


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವದು.


ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಿಕಿ ನೋಡಿ ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ ಕುಣಿಯುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.


ಜನರು ಪ್ರವೇಶಿಸುವಾಗ ಪ್ರಭುವು ಅವರ ಮಧ್ಯದಲ್ಲಿ ಪ್ರವೇಶಿಸಲಿ; ಅವರು ಹೊರಡುವಾಗ ಅವನೂ ಹೊರಡಲಿ.


ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು