Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:16 - ಕನ್ನಡ ಸತ್ಯವೇದವು J.V. (BSI)

16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಿಕಿ ನೋಡಿ ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ ಕುಣಿಯುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಅರಸನಾದ ದಾವೀದನು ಯೆಹೋವ ದೇವರ ಮುಂದೆ ಕುಣಿದಾಡುವುದನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:16
12 ತಿಳಿವುಗಳ ಹೋಲಿಕೆ  

ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು.


ಯೆಹೋವನ ನಿಬಂಧನ ಮಂಜೂಷವು ದಾವೀದನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಕಿನೋಡಿ ದಾವೀದನು ಕುಣಿಯುತ್ತಾ ಹಾರುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.


ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದದೆ.


ಕೆಲವರು - ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯಮಾಡಿದರು.


ಮತ್ತು ಅವನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು ಎಂಬದಾಗಿ ಆಜ್ಞಾಪಿಸಿದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಆದರೂ ಅವನು ಈಗ ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಆರ್ಭಟಿಸುತ್ತಾ ತುತೂರಿ ಊದುತ್ತಾ ಯೆಹೋವನ ಮಂಜೂಷವನ್ನು ತಂದರು.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು - ಈ ಹೊತ್ತು ಇಸ್ರಾಯೇಲ್ಯರ ಅರಸನು ಎಂಥ ಗೌರವದಿಂದ ನಡೆದುಕೊಂಡನು! ನೀಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ ಅಂದಳು. ಆಗ ದಾವೀದನು ಆಕೆಗೆ -


ಒಂದು ದಿವಸ ಸೌಲನು - ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ - ನೀನು ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು; ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ ಅಂದನು.


ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.


ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅಪಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು