Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:17 - ಕನ್ನಡ ಸತ್ಯವೇದವು J.V. (BSI)

17 ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯವಿುತ ಸ್ಥಳದಲ್ಲಿಟ್ಟರು; ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:17
12 ತಿಳಿವುಗಳ ಹೋಲಿಕೆ  

ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತಾನು ಯೆರೂಸಲೇವಿುನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿಟ್ಟ ಡೇರೆಗೆ ತೆಗೆದುಕೊಂಡು ಬಂದಿದ್ದರೂ


ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವಮಂಜೂಷಕ್ಕೋಸ್ಕರವೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.


ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದಲ್ಲಿ ಸೇರೋಣವಾಗಲಿ.


ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.


ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಆ ಸಮಾಧಾನಯಜ್ಞಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ವಪೆಯನ್ನೂ


ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇವಿುಸಲ್ಪಟ್ಟವರ ಪಟ್ಟಿ.


ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರನ್ನು ಯೆರೂಸಲೇವಿುಗೆ ಕರಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು