Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:18 - ಕನ್ನಡ ಸತ್ಯವೇದವು J.V. (BSI)

18 ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಿಂದ ಎಲ್ಲರನ್ನೂ ಆಶೀರ್ವದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:18
16 ತಿಳಿವುಗಳ ಹೋಲಿಕೆ  

ಆ ಯಜ್ಞಗಳೂ ಹೋಮಗಳೂ ಸಮರ್ಪಣೆಯಾದನಂತರ ದಾವೀದನು ಇಸ್ರಾಯೇಲ್ಯರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿ


ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ -


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರವು [ದೇವರಿಗೆ] ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ಇದಾದ ಮೇಲೆ ಅರಸನು ಎದ್ದು ನಿಂತಿದ್ದ ಇಸ್ರಾಯೇಲ್ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ -


ಇದಾದ ಮೇಲೆ ಅರಸನು ಎದ್ದುನಿಂತಿದ್ದ ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ -


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ಅವರನ್ನು ಆಶೀರ್ವದಿಸಿ ಕಳುಹಿಸಿದನು.


ಸಭೆಯಾಗಿ ನೆರೆದು ಬಂದಿರುವ ಇಸ್ರಾಯೇಲ್ಯರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇ ಹಣ್ಣಿನ ಉಂಡೆಯನ್ನೂ ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೋದರು.


ಇಸ್ರಾಯೇಲ್‍ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದದ್ದನ್ನು ಆತನ ಹಸ್ತವು ಈಗ ನೆರವೇರಿಸಿಯದೆ.


ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು.


ಹಾದುಹೋಗುವವರು - ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದೂ ಯೆಹೋವನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ ಎಂದೂ ಹೇಳುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು