Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:2 - ಕನ್ನಡ ಸತ್ಯವೇದವು J.V. (BSI)

2 ದೇವರ ಮಂಜೂಷವನ್ನು ತರುವದಕ್ಕಾಗಿ ಅವರೆಲ್ಲರ ಸಹಿತ ಯೆಹೂದದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಮಂಜೂಷವು ದೇವನಾಮದಿಂದ, ಅಂದರೆ ‘ಕೆರೂಬಿಯರ ನಡುವೆ ಆಸೀನರಾಗಿರುವ ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮದಿಂದ ಸುಪ್ರಸಿದ್ಧವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಕೆರೂಬಿಗಳ ನಡುವೆ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು ತನ್ನ ಸಂಗಡ ಇದ್ದ ಸಮಸ್ತ ಜನರನ್ನು ಕರೆದುಕೊಂಡು, ಯೆಹೂದದ ಬಾಲಾ ಎಂಬಲ್ಲಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:2
15 ತಿಳಿವುಗಳ ಹೋಲಿಕೆ  

ಅವರು ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೈನ್ಯಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಆಗ ಕಿರ್ಯತ್ಯಾರೀವಿುನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲ್ಯರ ಸದಮಲಸ್ವಾವಿು!


ಕಿರ್ಯತ್ಯಾರೀಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳೂ ಅವುಗಳ ಗ್ರಾಮಗಳೂ;


ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.


ಕಿರ್ಯತ್ಯಾರೀವಿುನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ ಎಂದು ಹೇಳಿಸಿದರು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು