Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:21 - ಕನ್ನಡ ಸತ್ಯವೇದವು J.V. (BSI)

21 ಯೆಹೋವನ ಸನ್ನಿಧಿಯಲ್ಲಿಯಷ್ಟೆ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟು ನನ್ನನ್ನೇ ಆರಿಸಿಕೊಂಡು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಕುಣಿದಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:21
15 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಿಕಿ ನೋಡಿ ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ ಕುಣಿಯುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.


ಈಗಲಾದರೋ ನಿನ್ನ ಅರಸುತನವು ನಿಲ್ಲುವದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆಹೋದದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇವಿುಸಿದ್ದಾನೆ ಎಂದು ಹೇಳಿದನು.


ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್‍ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.


ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ಯೆಹೋವನ ಮುಂದೆ ನರ್ತನಮಾಡುತ್ತಾ ಹೋದರು.


ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಯೆಹೋವನ ನಿಬಂಧನ ಮಂಜೂಷವು ದಾವೀದನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಕಿನೋಡಿ ದಾವೀದನು ಕುಣಿಯುತ್ತಾ ಹಾರುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.


ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು


ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರಹೊಂದುವದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು ಅಂದನು.


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನಷ್ಟೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು