Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:5 - ಕನ್ನಡ ಸತ್ಯವೇದವು J.V. (BSI)

5 ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ಯೆಹೋವನ ಮುಂದೆ ನರ್ತನಮಾಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ಸ್ವರಮಂಡಲ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ಯೆಹೋವ ದೇವರ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:5
17 ತಿಳಿವುಗಳ ಹೋಲಿಕೆ  

ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತೂರಿ ಇವುಗಳ ಧ್ವನಿಯೊಡನೆ ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ದೇವರ ಮುಂದೆ ನರ್ತನ ಮಾಡುತ್ತಾ ಹೋದರು.


ನಿಮ್ಮ ಗೀತಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣಾನಾದಕ್ಕೆ ಕಿವಿಗೊಡೆನು.


ವೀಣೆಯ ಮೇಲೆ ಮನಸ್ಸುಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ,


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ಪ್ರಭುವೇ, ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಪೂಜಿಸಲಿ;


ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ ಕುಲಭಾಷೆಗಳವರು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.


ನೀವು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.


ಈಗ ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರಕೊಂಡು ಬನ್ನಿರಿ ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.)


ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಬಾರಿಸಿದರೆ ನಿನಗೆ ಉಪಶಮನವಾಗುವದು ಎಂದು ಹೇಳಿದರು.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಹೀಗೆ ಎಲ್ಲಾ ಇಸ್ರಾಯೇಲ್ಯರು ಆರ್ಭಟಿಸುತ್ತಾ ಕೊಂಬು ತುತೂರಿಗಳನ್ನು ಗಟ್ಟಿಯಾಗಿ ಊದುತ್ತಾ ತಾಳಹೊಡೆಯುತ್ತಾ ಕಿನ್ನರಿ ಸ್ವರಮಂಡಲಗಳನ್ನು ಬಾರಿಸುತ್ತಾ ಯೆಹೋವನ ನಿಬಂಧನಮಂಜೂಷವನ್ನು ತಂದರು.


ಅವರು ಸ್ವರಮಂಡಲ ಕಿನ್ನರಿ ತುತೂರಿ ಇವುಗಳೊಡನೆ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು