Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:7 - ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಈ ತಪ್ಪಿನ ಸಲವಾಗಿ ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ ಉಜ್ಜನ ಮೇಲೆ ಕೋಪಗೊಂಡರು. ಅಂಥ ಅಗೌರವಕ್ಕಾಗಿ ಅವನನ್ನು ದಂಡಿಸಿದರು. ಅವನು ಅಲ್ಲೇ ದೇವರ ಮಂಜೂಷದ ಬಳಿ ಸತ್ತುಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:7
10 ತಿಳಿವುಗಳ ಹೋಲಿಕೆ  

ಬೇತ್‍ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಹಣಿಕಿನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಇದಲ್ಲದೆ ಐವತ್ತು ಸಾವಿರ ಜನರು ಮರಣಹೊಂದಿದರು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನುಂಟುಮಾಡಿದದರಿಂದ ಬೇತ್‍ಷೆಮೆಷಿನವರು ಗೋಳಾಡಿ -


ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು


ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮುಂದೆ ಸತ್ತನು.


ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.


ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚುಜ್ಜಾ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು